HomeSports News4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಯುಜುವೇಂದ್ರ ಚಹಲ್ –ಧನಶ್ರೀ..!

4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಯುಜುವೇಂದ್ರ ಚಹಲ್ –ಧನಶ್ರೀ..!

For Dai;y Updates Join Our whatsapp Group

Spread the love

ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದರು. ಚಹಲ್ ಪತ್ನಿ ಧನಶ್ರೀ ವರ್ಮಾ ಅವರಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದು, ಶೀಘ್ರದಲ್ಲೇ ಸೆಲೆಬ್ರಿಟಿ ದಂಪತಿಗಳು ಬೇರ್ಪಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು..

ಇದಾಗ್ಯೂ ಈ ಬಗ್ಗೆ ಚಹಲ್ ಆಗಲಿ, ಧನಶ್ರೀ ವರ್ಮಾ ಅವರಾಗಲಿ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.. ಆದ್ರೆ ಈಗ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ಚಹಲ್ ಮತ್ತು ಧನಶ್ರೀ ವಿಚ್ಛೇದನ ಪಡೆದುಕೊಂಡಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗಿ ವಿಚ್ಛೇದನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.

ಬಾಂದ್ರಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು ಚಹಲ್ ದಂಪತಿಗೆ ಸುಮಾರು 45 ನಿಮಿಷಗಳ ಕೌನ್ಸೆಲಿಂಗ್‌ಗೆ ನಿರ್ದೇಶಿಸಿದರು. ಈ ವೇಳೆ ಇಬ್ಬರೂ ಪರಸ್ಪರ ಒಪ್ಪಂದದಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ. ಕಳೆದ 18 ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಹೊಂದಾಣಿಕೆಯ ಸಮಸ್ಯೆಗಳು ವಿಚ್ಛೇದನಕ್ಕೆ ನಿರ್ಧರಿಸಿರುವುದಾಗಿ ತಿಳಿಸಿದರು. ನ್ಯಾಯಾಧೀಶರು ಅಧಿಕೃತವಾಗಿವಿಚ್ಛೇದನ ಮಂಜೂರು ಮಾಡಿದರು.

ಡಿವೋರ್ಸ್‌ ಪಡೆದ ನಂತರ ಚಹಲ್‌ ಕೈಮಗಿಯುತ್ತಿರುವ ಹನುಮಂತನ ಫೋಟೋ ಹಾಕಿದ್ದಾರೆ. ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಚಹಲ್ ಬರೆದುಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!