ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಗಾಗಿ ನೀಡುವ ಅಸಾಧಾರಣ ಪ್ರತಿಭಾ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಜರುಗಿತು.
ಲಲಿತಕಲಾ ಕ್ಷೇತ್ರದಲ್ಲಿ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಝಯನ ಖಾದರಸಾಬ ತಹಸೀಲ್ದಾರ ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದ ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕಲೆ, ಸಂಸ್ಕೃತಿಕ ಕ್ಷೇತ್ರದಲ್ಲಿನ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2024-25ನೇ ಸಾಲಿಗೆ ಗದಗ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು 10 ಸಾವಿರ ರೂ ನಗದು ಪುರಸ್ಕಾರದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆರಂದು ಗೌರವಿಸಲಾಯಿತು.
ಈ ವಿದ್ಯಾರ್ಥಿಗೆ ಚಿತ್ರಕಲೆ ಮತ್ತು ಕರಕುಶಲ ತರಬೇತಿ ನೀಡಿದ ಕಲಾವಿದರಾದ ಡಾ. ಜಾಕೀರ ಹುಸೇನ ಅವರಿಗೆ ನಗರದ ಎಂ.ಕೆ. ಕೊರ್ಲಹಳ್ಳಿ ಫೌಂಡೇಶನ್ ಟ್ರಸ್ಟ್ ನ ಅಧ್ಯಕ್ಷರು, ಸರ್ವ ಸದಸ್ಯರು, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆ ಕಸ್ತೂರಿ ಆಲೂರ, ಮುತ್ತು ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕಿ ಜೀನತ ಹಾಗೂ ಸಿಬ್ಬಂದಿ ವರ್ಗ, ಕಲಾಕಾರ ಬಳಗದ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.