ಧಾರವಾಡ: ಗ್ಯಾರಂಟಿ ಹೆಸರೇಳಿಕೊಂಡು ಜನಾದೇಶದ ಮೂಲಕ ಅಧಿಕಾರದ ಗದ್ದುಗೆ ಏರಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟಿಸಿದೆ.
Advertisement
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ ಬೆಲೆ ಏರಿಕೆ ಮಾಡುತ್ತಾ ಬಡ ಜನರ ಹೊಟ್ಟೆ ಮೇಲೆ ಹೊಡೆಯವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಎರಡು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸಾಕಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರಿಗೆ ಸಾಕಷ್ಟು ತೊಂದರೆಯನ್ನು ತಂದಿಟ್ಟಿದೆ. ಈ ಸರ್ಕಾರ ಆರ್ಥಿಕವಾಗಿ ದಿವಾಳಿ ಸಹ ಆಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ.