ವಿಜಯಸಾಕ್ಷಿ ಸುದ್ದಿ, ಗದಗ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ
ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಕ್ರಾಸ್ ಬಳಿ ನಡೆದಿದೆ.
ಗದಗನಿಂದ ಅಸುಂಡಿ ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುವಾಗ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಅಬಕಾರಿ ನಿರೀಕ್ಷಕರಾದ ಶಹನಾಜ್ ಬೇಗಂ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಸುಂಡಿ ಗ್ರಾಮದ ಕಾರು ಚಾಲಕ ಮಂಜುನಾಥ ವೆಂಕಪ್ಪ ಪೂಜಾರ, ಈರಣ್ಣ ರಾಮಣ್ಣ ಬಡಿಗೇರ ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ದಾಳಿ ವೇಳೆ 5 ಲಕ್ಷ 50 ಸಾವಿರ ಮೌಲ್ಯದ ಕಾರು ಹಾಗೂ 15 ಸಾವಿರ ಮೌಲ್ಯದ 35 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.
ಚುನಾವಣೆಯಲ್ಲಿ ಅಕ್ರಮವಾಗಿ ಹಂಚಲು ಈ ಮದ್ಯ ತೆಗೆದುಕೊಂಡು ಹೋಗುವಾಗ ದಾಳಿ ನಡೆಸಿದ್ದು, ಈ ಕುರಿತು ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಳಿ ವೇಳೆ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಅಬಕಾರಿ ನಿರೀಕ್ಷಕರಾದ ಶಹನಾಜ್ ಬೇಗಂ ಸೇರಿದಂತೆ ಅಬಕಾರಿ ಇಲಾಖೆ ಸಿಬ್ಬಂದಿಗಳು ಇದ್ದರು.