ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ
ಎಸ್ಟಿಗೆ ಕುರುಬ ಸಮಾಜ ಸೇರಿಸೊಕೆ ಬರುವುದಿಲ್ಲ ಎಂದವರು ಬೆಂಬಲ ಯಾಕೆ ಕೊಟ್ಟರು. ಈ ರೀತಿಯ ಹೋರಾಟ ಬೇಡವೆಂದರೆ ಮತ್ಯಾವ ರೀತಿಯಲ್ಲಿ ಹೋರಾಟ ಮಾಡಬೇಕೆಂಬುವುದನ್ನು ಹೇಳಲಿ ಹಾಗೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರನ್ನು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಸಚಿವರು,
ಸ್ವಾಮಿಜಿಗಳಿಬ್ಬರು ಚರ್ಚೆ ಮಾಡಿ ಹೋರಾಟ ರೂಪಿಸಿದಾಗ ನನ್ನ ಬೆಂಬಲವಿದೆ. ಬರುವುದಕ್ಕೆ ಆಗುವುದಿಲ್ಲ ಎಂದಿದ್ದರು. ಈಗಲೂ ಬಂದು ಹೋರಾಟದಲ್ಲಿ ಪಾಲ್ಗೊಳ್ಳಲಿ ನಮ್ಮ ಆಭ್ಯಂತರವಿಲ್ಲ ಎಂದ ಅವರು, ಕುರುಬ ಸಮಾಜವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವ ಕಾಗೆನೆಲೆಯ ಇಬ್ಬರು ಸ್ವಾಮೀಜಿಗಳ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ತಿಳಿಸಿದರು.
ಪಂಚಮಸಾಲಿ ಸಮಾಜದವರು ಪಾದಯಾತ್ರೆ ಮೂಲಕ ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಪಾದಯಾತ್ರೆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಬರುವುದಿಲ್ಲ.
ಯಾರು ಅರ್ಹರೋ ಅವರಿಗೆ ಖಂಡಿತವಾಗಿ ಮೀಸಲಾತಿ ಸಿಗುತ್ತದೆ. ಅಲ್ಲದೇ, ಅರ್ಹತೆ ಇರುವವರಿಗೆ ಸರ್ಕಾರ ಮೀಸಲಾತಿ ಕೊಡಲೇ ಬೇಕಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.