ವಿಜಯಸಾಕ್ಷಿ ಸುದ್ದಿ, ರಾಯಚೂರು
ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ಜೋರಾಗಿದೆ. ಮೂರನೇ ಅಲೆಯಲ್ಲಿ ಸೋಂಕು ಮಕ್ಕಳನ್ನು ಕಾಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಎರಡನೇ ಅಲೆಯಲ್ಲಿಯೇ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 522 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ದೇವದುರ್ಗದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ 322 ಮಕ್ಕಳು ಸೇರಿದಂತೆ 522 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಸದ್ಯ ಈ ಮಕ್ಕಳನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ 3ನೇ ಅಲೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ರಿಮ್ಸ್ ನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲು ಈಗಾಗಲೇ 200 ಬೆಡ್ ಗಳ ವಾರ್ಡ್ ತೆರೆಯಲಾಗಿದೆ.
ಜಿಲ್ಲೆಯ ಘಟ್ಟರಾಗಡಹಳ್ಳಿಯಲ್ಲಿ ಒಂದೇ ದಿನ 12 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮಕ್ಕಳನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಈ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ.