ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿದೆ. ಹೀಗಾಗಿ ಹಿರಿಯರಷ್ಟೇ ಇರುವ ಮನೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ತೊಂದರೆಯಾಗುತ್ತಿದೆ. ಈ ಸಂದರ್ಭದಲ್ಲಿ ಇಂತಹ ವ್ಯಕ್ತಿಗಳಿಗೆ ಉಪೇಂದ್ರ ಅವರೇ ಮನೆಯ ಮಗನಾಗಿದ್ದಾನೆ.
ಪ್ರತಿ ದಿನ ಸಿನಿಮಾ ಚಟುವಟಿಕೆಗಳನ್ನೇ ನಂಬಿಕೊಂಡಿದ್ದ ಬಡ ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಅದರಲ್ಲೂ ಕೆಲವು ಹಿರಿಯ ಕಲಾವಿದರು ಕಣ್ಣೀರಿನಲ್ಲಿ ದಿನ ದೂಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ನೆರವಿಗೆ ಉಪೇಂದ್ರ ಧಾವಿಸಿದ್ದಾರೆ.
ಸಿನಿಮಾವನ್ನೇ ತಮ್ಮ ಬದುಕಿನ ಉಸಿರಾಗಿಸಿಕೊಡಿದ್ದ ಹಿರಿಯ ಕಲಾವಿದರಿಗೆ ಇಂದು ಚಿತ್ರ ರಂಗದಲ್ಲಿ ಸರಿಯಾಗಿ ಅವಕಾಶಗಳು ಸಿಗುತ್ತಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಅಂಥವರ ಕಷ್ಟ ಇನ್ನಷ್ಟು ಹೆಚ್ಚಾಗಿದೆ. ಇದನ್ನು ಅರಿತ ನಟ ಉಪೇಂದ್ರ ಅವರು ಹಿರಿಯ ನಟ – ನಟಿಯರ ಮನೆಯ ಮಗನಾಗಿದ್ದಾರೆ. ಅಂತಹ ಕುಟುಂಬಗಳಿಗೆ ಅವಶ್ಯವಿರುವ ದಿನಸಿ ಸಾಮಗ್ರಿ ಮತ್ತು ಅಗತ್ಯ ವಸ್ತುಗಳನ್ನು ಕಳುಹಿಸಿ ಕೊಟ್ಟಿದ್ದಾರೆ.
ಮೋಹನ್ ಜುನೇಜಾ, ಶ್ರೀಲಲಿತಾ, ಕಾಮಿನಿಧರನ್, ಬೆಂಗಳೂರು ನಾಗೇಶ್, ಎಟಿ ರಘು, ಉಮೇಶ್ ಮುಂತಾದವರ ಮನೆಗೆ ಉಪೇಂದ್ರ ಅವರು ದಿನಸಿ ಕಿಟ್ಗಾಳನ್ನು ಕಳುಹಿಸಿದ್ದಾರೆ.
ಈ ಹಿರಿಯ ಜೀವಗಳು ಉಪೇಂದ್ರ ಅವರಿಗೆ ಮನಸಾರೆ ಆಶೀರ್ವಾದಿಸಿದ್ದಾರೆ.