ವಿಜಯಸಾಕ್ಷಿ ಸುದ್ದಿ, ಮೈಸೂರು
ನೆರೆಯ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ- ಕೇರಳ ಗಡಿ ಬಾವಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ ರಾಜ್ಯಕ್ಕೆ ಪ್ರವೇಶಿಸುವ ಪ್ರತಿಯೊಂದು ವಾಹನ ನಿಲ್ಲಿಸಿ ಆರ್ ಟಿಪಿಎಸ್ ಟೆಸ್ಟ್ ನಡೆಸಿ ನೆಗೆಟಿವ್ ವರದಿ ಬಂದವರನ್ನು ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡುತ್ತಿದ್ದಾರೆ.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಕೊರೊನಾ ನೆಗೆಟಿವ್ ವರದಿ ಅಥವಾ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಲಸಿಕೆ ಪಡೆದ ಬಗ್ಗೆ ದಾಖಲೆ ಹಾಗೂ ಆರ್ ಟಿಪಿಎಸ್ ನೆಗಟಿವ್ ವರದಿ ಇಲ್ಲದವರಿಗೆ ರಾಜ್ಯ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ.