
ವಿಜಯಸಾಕ್ಷಿ ಸುದ್ದಿ, ಕೊಪ್ಪಳ:
ಕೊಪ್ಪಳ ನಗರದ ಹೊರವಲಯದಲ್ಲಿ, ನೀರಿನ ಸಂಗ್ರಹಾಗಾರ ಇರುವ ಸಿಂದೋಗಿ ರಸ್ತೆಯ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಕಳೆದ ಎರಡು ತಿಂಗಳಿಂದ ಈ ಭಾಗದ ರೈತರು ಚಿರತೆಯನ್ನು ಗಮನಿಸಿದ್ದಾರೆ. ಕಲ್ಲು ಬಂಡೆಯ ಮೇಲೆ ಅದು ಬಿಸಿಲಿಗೆ ಮೈಯೊಡ್ಡಿ ಕೂತಿದ್ದನ್ನು ಕಂಡು ಗಾಬರಿಯಾದ ರೈತರು, ಕೊಪ್ಪಳ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಆದರೆ, ಉಡಾಫೆ ವರ್ತನೆ ತೋರಿದ ಅರಣ್ಯ ಇಲಾಖೆ ಸಿಬ್ಬಂದಿ, ನಗರ ಪ್ರದೇಶದಲ್ಲಿ ಯಾವುದೇ ಚಿರತೆ ಇಲ್ಲ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ಸ್ಥಳೀಯ ಪ್ರದೇಶದ ರೈತರು ಚಿರತೆ ಬಂಡೆಗಲ್ಲಿನಲ್ಲಿ ಕೂತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.



