ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಶುಕ್ರವಾರ ಶುಭ ಸುದ್ದಿ ನೀಡಿದೆ. ಇದುವರೆಗೂ ಎರಡಂಕಿಗೆ ಸೀಮಿತವಾಗಿದ್ದ ಸೋಂಕು ಇಂದು ಒಂದಂಕಿಗೆ ಬಂತು ನಿಂತಿದೆ. ಇಂದು 09 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಶುಕ್ರವಾರವೂ ಸಾವಿನ ಸಂಖ್ಯೆ ಒಂದಕ್ಕೆ ಸೀಮಿತವಾಗಿದೆ.
ಇಂದು 09 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25838 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -04, ಮುಂಡರಗಿ-02, ನರಗುಂದ-00, ರೋಣ-03, ಶಿರಹಟ್ಟಿ-00, ಹೊರಜಿಲ್ಲೆಯ-00, ಸೇರಿದಂತೆ 09 ಪ್ರಕರಣಗಳು ದೃಢಪಟ್ಟಿವೆ.
ಶುಕ್ರವಾರ ಕೋವಿಡ್ ನಿಂದ ಒಬ್ಬರು ಮೃತಪಟ್ಟ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ವರದಿಯಲ್ಲಿ ಮಾಹಿತಿ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 307 ಜನರು ಮೃತಪಟ್ಟಂತಾಗಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿ 60 ವರ್ಷದ ಮಹಿಳೆ ಜೂನ್ 26 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಜುಲೈ 1 ರಂದು ಮೃತಪಟ್ಟಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು 24 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25336 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 195 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.