ಕೋವಿಡ್ ವರದಿ ಇಲ್ಲದ್ದಕ್ಕೆ ದಾಖಲಿಸಿಕೊಳ್ಳಲು ಒಪ್ಪದ ಆಸ್ಪತ್ರೆ – ನಿಂತಲ್ಲಿಯೇ ಹೆರಿಗೆಯಾಗಿ ಮಗು ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಮಂಡ್ಯ

Advertisement

ಕೊರೊನಾ ವರದಿ ಇಲ್ಲವೆಂಬ ಕಾರಣಕ್ಕೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಂಡಿರಲಿಲ್ಲ. ಹೀಗಾಗಿ ಆಸ್ಪತ್ರೆಯ ಮುಂಭಾಗದಲ್ಲಿ ನಿಂತಲ್ಲಿಯೇ ಹೆರಿಗೆಯಾಗಿದ್ದು, ಪರಿಣಾಮ ನವಜಾತ ಶಿಶು ಕೆಳಗೆ ಬಿದ್ದು ಸಾವನ್ನಪ್ಪಿರುವ ಮನ ಕಲಕುವ ಘಟನೆ ನಡೆದಿದೆ.

ಈ ಘಟನೆ ಇಲ್ಲಿಯ ಮಿಮ್ಸ್ ನ ಹೆರಿಗೆ ವಾರ್ಡ್ ಮುಂಭಾಗದಲ್ಲಿ ನಡೆದಿದೆ. ನಗರದ ಗುತ್ತಲು ಬಡಾವಣೆಯ ನಿವಾಸಿ ಇಸ್ಮಾಯಿಲ್ ಎಂಬುವವರ ಪತ್ನಿ ಸೋನು ಅವರು 7 ತಿಂಗಳ ಗರ್ಭಿಣಿ ಆಗಿದ್ದರು. ಆದರೆ, ನಿನ್ನೆ ರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಪರೀಕ್ಷೆ ಮಾಡಿದಾಗ ಮಗುವಿನ ಎದೆಯ ಬಡಿತ ಕೇಳುತ್ತಿಲ್ಲ. ನಾಳೆ ಬಂದು ಆಸ್ಪತ್ರೆಗೆ ದಾಖಲಾಗಿ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿಯೇ ಇಸ್ಮಾಯಿಲ್ ನಿನ್ನೆ ರಾತ್ರಿ ಪತ್ನಿಯ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಆದರೆ, ಇಂದು ಬೆಳಿಗ್ಗೆ ನೋವು ಹೆಚ್ಚಾದ ಕಾರಣ, ಪತ್ನಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದರು. ಆದರೆ, ಈ ಸಂದರ್ಭದಲ್ಲಿ ಕೋವಿಡ್ ಟೆಸ್ಟ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ, ದಾಖಲು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆಯ ಪರಿಸ್ಥಿತಿ ಕಂಡು ಕುಟುಂಬಸ್ಥರು ಹಾಗೂ ಅಲ್ಲಿದ್ದ ಸಾರ್ವಜನಿಕರು ದಾಖಲು ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಆದರೂ ಆಸ್ಪತ್ರೆ ಸಿಬ್ಬಂದಿ ದಾಖಲು ಮಾಡಿಕೊಂಡಿಲ್ಲ. ಆದರೆ, ಸೋನು ನಿಂತಿದ್ದ ಸಂದರ್ಭದಲ್ಲಿಯೇ ಹೆರಿಗೆ ಆಗಿದೆ. ಆಗ ಮಗು ಕೆಳಕ್ಕೆ ಬಿದ್ದು ಸಾವನ್ನಪ್ಪಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ನಡೆದ ನಂತರ ಆಸ್ಪತ್ರೆಯ ಸಿಬ್ಬಂದಿ ಸೋನು ಅವರನ್ನು ದಾಖಲು ಮಾಡಿಕೊಳ್ಳಲಾಯಿತು. ಇತ್ತ ಆಸ್ಪತ್ರೆ ಸಿಬ್ಬಂದಿ ಪೋಷಕರ ಮೇಲೆ ತಪ್ಪು ಹೇರುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here