ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದೆ.ಇದರ ನಡುವೆ ಫ್ರಂಟ್ ಲೈನ್ ಕೊರೋನಾ ವಾರಿಯರ್ಗಳಾದ ಪೊಲೀಸರಿಗೂ ಸಹ ಕೊರೋನಾ ಪಾಸಿಟಿವ್ ದೃಢವಾಗಿದೆ.
Advertisement
ಜಿಲ್ಲೆಯ ಗಂಗಾವತಿ ಗ್ರಾಮೀಣ ವೃತ್ತದ ಸಿಪಿಐ, ಟ್ರಾಫಿಕ್ ಪಿಎಸ್ಐ ಸೇರಿದಂತೆ ಒಟ್ಟು 17 ಜನ ಪೊಲೀಸರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಇನ್ನೂ ಎಲ್ಲರಿಗೂ ಸಹ ಯಾವುದೇ ಕೊರೋನಾ ಲಕ್ಷಣಗಳು ಇಲ್ಲದಿದ್ದರೂ ಸಹ ಪಾಸಿಟಿವ್ ಕಂಡುಬಂದಿದ್ದು, ಎಲ್ಲರೂ ಹೋಮ್ ಐಸೂಲೇಷನಲ್ಲಿ ಇದ್ದಾರೆ.
ಯಾರು ಸಹ ಆತಂಕಕ್ಕೆ ಒಳಗಾಗದಿರಿ ಯಾರಿಗೂ ರೋಗದ ಲಕ್ಷಣ ಕಂಡು ಬಂದಿಲ್ಲ, ಧೈರ್ಯದಿಂದ ಎದುರಿಸಿ ಕೊರೋನಾ ವಿರುದ್ಧ ಗೆಲ್ಲುತ್ತಾರೆ ಎಂದು ಗಂಗಾವತಿ ಉಪವಿಭಾಗದ ಡಿವೈಎಸ್ಪಿ ರುದ್ರೇಶ್ ಉಜ್ಜಿನಕೊಪ್ಪ ಅವರು ಆತ್ಮಸ್ಥೈರ್ಯ ತುಂಬಿದ್ದಾರೆ.