ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಬಿಜೆಪಿ ವರಿಷ್ಠರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಅವರೊಂದಿಗೆ ದೆಹಲಿ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ.
ಸ್ನೇಹಿತ ಸಿಪಿ ಯೋಗೇಶ್ವರ್ ಅವರಿಗೆ ಸ್ಥಾನ ಕೊಡಿಸಲು ಸಾಹುಕಾರ್ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಸಭೆ ನಡೆಸಿದ್ದ ಮಿತ್ರ ಮಂಡಳಿ ‘ನಮ್ಮಜೊತೆ ಪಕ್ಷ ಬಿಟ್ಟು ಬಂದವರಿಗೂ ನಿಗಮ-ಮಂಡಳಿ ಕೊಡಿ. ಕ್ಷೇತ್ರ ಭೇಟಿ ಹೋದಾಗ ಕಾರ್ಯಕರ್ತರಿಗೆ ಉತ್ತರಿಸೋಕೆ ಆಗುತ್ತಿಲ್ಲ ಎಂದು ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರೊಂದಿಗೆ ಚರ್ಚಿಸಿ ಬೇಡಿಕೆ ಇಡೇರಿಸುವಂತೆ ಪಟ್ಟು ಹಿಡಿದಿದ್ದಾರೆ’ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ ‘ಇಂತಹ ಸಭೆಗಳನ್ನು ಸಿಎಂ ಕಚೇರಿ, ಪಕ್ಷದ ಕಚೇರಿ ಮಾತ್ರ ನಡೆಸಬೇಕು. ನಾನು ನಾಯಕ ಅಂತಾ ಎಲ್ಲೂ ಹೇಳಿಲ್ಲ. ನಮ್ಮದು ಸಾಮೂಹಿಕ ನಾಯಕತ್ವ’ ಎಂದು ಮಿತ್ರ ಮಂಡಳಿಗೆ ಟಾಂಗ್ ಕೊಟ್ಟಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ರಮೇಶ ಜಾರಕಿಹೊಳಿ
ವಾಪಾಸ್ ಆಗುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಸೇರಿದಂತೆ ಹಲವು ನಾಯಕರು ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.