ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಧಾರವಾಡ
ಇಲ್ಲಿನ ಜಿಪಂ ಸಿಇಒ ಆಗಿ ಡಾ.ಸುಶೀಲಾ ಬಿ. ಶುಕ್ರವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಇಲ್ಲಿಂದ ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ್ ಅವರು ಡಾ.ಸುಶೀಲಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಹೈದರಾಬಾದ್‌ನ ಗಾಂಧಿ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿರುವ ಡಾ.ಸುಶೀಲಾ, ಕೆಲಕಾಲ ವೈದ್ಯಕೀಯ ವೃತ್ತಿ ನಡೆಸಿ ನಂತರ 2013ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ರೇಲ್ವೆ ಸಿಬ್ಬಂದಿ ಸೇವೆಗೆ ಅರ್ಹತೆ ಪಡೆದರು.
ಪುನಃ 2015ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್) ಕರ್ನಾಟಕ ಕೇಡರ್‌ಗೆ ಆಯ್ಕೆಯಾದರು. ರಾಯಚೂರಿನಲ್ಲಿ ಜಿಲ್ಲಾ ತರಬೇತಿ, ಸೇಡಂ ಹಾಗೂ ಕಲಬುರ್ಗಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
Trending Now



