ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಗದಗನ ಶಾಸಕ ಎಚ್ ಕೆ ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.
Advertisement
ಈ ಬಗ್ಗೆ ತಮ್ಮ ಟ್ವಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕ ಎಚ್ ಕೆ ಪಾಟೀಲ್, ನನಗೆ ಪಾಸಿಟಿವ್ ದೃಢವಾಗಿದ್ದು, ಮನೆಯಲ್ಲೇ 10 ದಿನಗಳ ಕಾಲ ಚಿಕಿತ್ಸೆಯೊಂದಿಗೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕದಲ್ಲಿ ಇರುವವರು ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಸೂಚನೆ ನೀಡಿದ್ದಾರೆ.
ಕೊರೋನಾ ಲಕ್ಷಣಗಳು ಇದ್ದರೂ ಯಾವುದೇ ತೊಂದರೆ ಇಲ್ಲ. ಬೇಗ ಗುಣಮುಖವಾಗುವ ಭರವಸೆ ಇದೆ ಅಂತ ಎಚ್ ಕೆ ಪಾಟೀಲ್ ಆಶಾ ಭಾವನೆ ವ್ಯಕ್ತಪಡಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಎಚ್ ಕೆ ಪಾಟೀಲ್ ನೇಮಕ ಗೊಂಡಿದ್ದರು. ಕಳೆದ ವಾರ ಅಲ್ಲಿನ ಕಾಂಗ್ರೆಸ್ ನಾಯಕರ ಜೊತೆ ಸಭೆಯಲ್ಲಿಯೂ ಭಾಗಿಯಾಗಿದ್ದರು.