ನಮ್ಮಲ್ಲಿ ಸಿಎಂ ಬದಲಾವಣೆಯ ಮಾತೇ ಬಂದಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ

0
Spread the love

ವಿಜಯಸಾಕ್ಷಿ ಸುದ್ದಿ, ಮಂಗಳೂರು

Advertisement

ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶ. ಇದು ನಮ್ಮ ಪಕ್ಷದ ವಿಶೇಷತೆ ಎಂದು ಸಿಎಂ ಯಡಿಯೂರಪ್ಪ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರುವುದು ಆದರ್ಶ. ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.

ಪಕ್ಷದಲ್ಲಿ ಇಂಥಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ನಮ್ಮ ಸರ್ವ ಸಮ್ಮತಿಯ ನಾಯಕ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ರಾಷ್ಟ್ರೀಯ ನಾಯಕರು ಹೇಳಿದ್ದಾರೆ. ಇಂಥಹ ಚರ್ಚೆಗಳು ಅಪ್ರಸ್ತುತ. ಸದ್ಯ ಕೋವಿಡ್ ನಿರ್ವಹಣೆ ನಮ್ಮ ಜವಾಬ್ದಾರಿ. ಆದರೆ, ಆದರ್ಶ ಹೇಳಿಕೆಯನ್ನು ಸಿಎಂ ಕೊಟ್ಟಿದ್ದಾರೆ. ಪಕ್ಷ ಮತ್ತು ‌ರಾಷ್ಡ್ರೀಯ ನಾಯಕರ ಮುಂದೆ ಈ ಚರ್ಚೆಯೇ ಇಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಆದ ಮೇಲೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದರು. ಇಂತಹ ಮಾತುಗಳ ನೋವಿನಿಂದ ಸಿಎಂ ಈ ಹೇಳಿಕೆ ನೀಡಿರಬಹುದು. ನಾನೊಬ್ಬ ಕಾರ್ಯಕರ್ತ ಎಂಬ ನೆಲೆಯಲ್ಲಿ ಅವರು ಇವತ್ತು ಸಂದೇಶ ಕೊಟ್ಟಿದ್ದಾರೆ. ಪರ್ಯಾಯ ನಾಯಕತ್ವದ ಬಗ್ಗೆ ಅವರು ಸಹಜ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ ಹತ್ತಾರು ನಾಯಕರಿದ್ದಾರೆ ಎಂದು ಒಬ್ಬ ಹಿರಿಯರಾಗಿ ಹೇಳಿದ್ದಾರೆ ಎಂದು ಹೊಗಳಿದ್ದಾರೆ.

ನಮ್ಮ ಪಕ್ಷದಲ್ಲಿ ಯಾವುದೇ ರೇಬಲ್ ಗಳಿಲ್ಲ. ಈ ಕುರಿತು ಎಲ್ಲರಿಗೂ ಈಗಾಗಲೇ ಹೇಳಲಾಗಿದೆ. ಏನೇ ನೋವುಗಳಿದ್ದರೂ ಮಾತುಕತೆ ಮಾಡಲು ಸೂಚಿಸಿದ್ದೇವೆ. ನೋವುಗಳು, ಹತಾಶೆ ಸರ್ಕಾರ ನಡೆಸುವ ಸಂದರ್ಭದಲ್ಲಿ ಸಹಜ. ಅವುಗಳನ್ನು ಸರಿ ಮಾಡುವ ಪ್ರಯತ್ನಗಳು ನಡೆದಿವೆ. ಆದರೆ, ನಮ್ಮಲ್ಲಿ ಸಿಎಂ ಬದಲಾವಣೆ ಚರ್ಚೆಯಿಲ್ಲ, ಗೊಂದಲ, ಅಪಸ್ವರಗಳಿಲ್ಲ. ಮುಂದಿನ ತಿಂಗಳು ಮತ್ತೊಮ್ಮೆ ಶಾಸಕರ ಸಭೆ ನಡೆಯಲಿದೆ. ಆ ಸಂದರ್ಭದಲ್ಲಿ ಅಪಸ್ವರಗಳಿದ್ದರೆ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here