ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ಬುಧವಾರ ಪೊಲೀಸ್ ಹುತಾತ್ಮ ದಿನ ಆಚರಿಸಲಾಯಿತು.
ಸುರಿವ ಮಳೆಯ ನಡುವೆಯೂ ಹುತಾತ್ಮ ದಿನ ಆಚರಿಸುವ ಮೂಲಕ ಹುತಾತ್ಮರಾದ ಪೊಲೀಸರಿಗೆ ನಮನ ಸಲ್ಲಿಸಲಾಯಿತು. ನಗರದ ಗಣ್ಯರು, ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು, ವರ್ತಕರು ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಸ್ಪಿ ಟಿ.ಶ್ರೀಧರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹುತಾತ್ಮ ದಿನಾಚರಣೆ ಅಂಗವಾಗಿ ಮಳೆಯ ಮಧ್ಯೆಯೂ ಪೊಲೀಸ್ ಕವಾಯತ್ತು ನಡೆಯಿತು.
Advertisement