ಮಾಸ್ಕ್ ಧರಿಸದ, ಕೋವಿಡ್ ನಿಯಮ ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ; ಎಸ್ಪಿ ಯತೀಶ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕೋವಿಡ್-19 ಸೋಂಕು ಎರಡನೇ ಅಲೆ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಮಾರ್ಗಸೂಚಿಗಳನ್ವಯ ಮೇ 12 ರ ಮುಂಜಾನೆ 06.00 ಗಂಟೆಯವರೆಗೆ ಜನತಾ ಕರ್ಫ್ಯೂ ವಿಧಿಸಿ ಆದೇಶ ಮಾಡಿದ್ದು, ಸರಕಾರದ ನಿರ್ದೇಶನ, ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲ ಠಾಣೆ, ವೃತ್ತ, ಉಪ ವಿಭಾಗದ ಅಧಿಕಾರಿ, ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ.

ಸರಕಾರದ ಮಾರ್ಗಸೂಚಿಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಾಸ್ಕ್ ಧರಿಸದೇ ಇದ್ದ ಒಟ್ಟು 5493 ( Not wearing Face mask in public ) ಜನರ ವಿರುದ್ದ ಪ್ರಕರಣಗಳನ್ನು ದಾಖಲಿಸಿ, ರೂ 6,68,000=00 ಗಳನ್ನು ದಂಡ ವಸೂಲಿ ಮಾಡಿ ಸರಕಾರಕ್ಕೆ ಭರಣಾ ಮಾಡಲಾಗಿದೆ. ಹಾಗೂ ಸರಕಾರದ ನಿಯಮಗಳನ್ನು ಪಾಲನೆ ಮಾಡದೇ ಇದ್ದಂತ ಸಾರ್ವಜನಿಕರ ವಿರುದ್ದ Karnataka Epidemic Disease Act 2020ರಡಿ 11 ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನಗಳು/ಮಾರ್ಗಸೂಚಿಗಳನ್ನು ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಉಪಯೋಗ ಮಾಡಿ ಕೋವಿಡ್-19 2ನೇ ಅಲೆ ವೈರಾಣು ಹರಡುವುದನ್ನು ತಡೆಗಟ್ಟಲು ಸಹಕಾರ ನೀಡಲು ಕೋರಿದೆ.

ಸಾರ್ವಜನಿಕರು ವಿನಾ:ಕಾರಣ ವಾಹನಗಳನ್ನು ತೆಗೆದುಕೊಂಡು ರಸ್ತೆ ಸಂಚಾರ ಮಾಡುವುದು ಸರಿ ಅಲ್ಲ. ಅಲ್ಲದೇ ಸರಕಾರದ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದವರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್ ಯತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here