ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಮಹಾಮಾರಿಯ ಅಬ್ಬರದ ನಡುವೆಯೂ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ಹೈಕಮಾಂಡ್, ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪ್ರಯತ್ನಿಸುತ್ತಿದೆಯೇ? ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯದ ಬಿಜೆಪಿಯಲ್ಲಿನ ಬದಲಾವಣೆಗಳು ಕೂಡ ಇದಕ್ಕೆ ಪುಷ್ಟಿ ನೀಡುತ್ತಿವೆ.
ಬಿಜೆಪಿಯ ಶಾಸಕರ ಸಭೆ ನಡೆಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ಈ ಕುರಿತು ನಿನ್ನೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿಯೂ ಸಿಎಂ ಸುಳಿವು ಕೊಟ್ಟಿದಾರೆ. ಜೂನ್ ಮೊದಲ ವಾರದಲ್ಲಿ ಶಾಸಕರ ಸಭೆ ನಡೆಸಬೇಕೆಂದು ಹೈಕಮಾಂಡ್ ಆದೇಶ ನೀಡಿದೆ ಎನ್ನಲಾಗಿದೆ. ಹೀಗಾಗಿ ಜೂ. 7ರಂದು ರಂದು ಪಕ್ಷದ ಶಾಸಕರ ಸಭೆ ನಡೆಸು ಸಿಎಂ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ. ಆದರೆ, ಈ ಸಭೆಯಲ್ಲಿ ನಾಯಕರ ಬದಲಾವಣೆ ಕುರಿತು ಚರ್ಚೆ ನಡೆಯುತ್ತದೆಯೇ ಎಂಬ ಪ್ರಶ್ನೆ ಸದ್ಯ ಮೂಡಿದೆ.
ಇನ್ನೊಂದೆಡೆ ಶಾಸಕರ ಸಭೆಯ ದಿನದಂದೇ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯಲಿದೆ ಎಂದು ಯಡಿಯೂರಪ್ಪ ವಿರೋಧಿ ಬಣ ಹೇಳುತ್ತಿದೆ. ಆದರೆ, ಸಿಎಂ ಮಾತ್ರ ಕೊರೊನಾ ನಿರ್ವಹಣೆ ಕುರಿತು ಮಾತ್ರ ಚರ್ಚೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಅಂದರೆ, ಶನಿವಾರ ಸಿಎಂ ಯಡಿಯೂರಪ್ಪ ಅವರ ಮನೆಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆರೆಸ್ಸೆಸ್ ನಾಯಕರು ಭಾಗಿಯಾಗಿದ್ದರು. ಆರೆಸ್ಸೆಸ್ ಮುಖಂಡ ಮುಕುಂದ್ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಕುರಿತೇ ಚರ್ಚೆ ನಡೆದಿದೆ ಎನ್ನಲಾಗುತ್ತಿದ್ದು, ಅವರ ಭೇಟಿಯ ನಂತರ, ಶಾಸಕರ ಸಭೆ ಕರೆಯಲು ಸಿಎಂಗೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.