ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಇರುವ ಹಿನ್ನೆಲೆಯಲ್ಲಿ ಶಿಕ್ಷಕಿಯರಿಗೆ ಮನೆಯಲ್ಲಿಯೇ ಕುಳಿತು ಕೆಲಸ ನಿರ್ವಹಿಸಲು ಸರ್ಕಾರ ಅವಕಾಶ ನೀಡಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಹಿನ್ನೆಲೆಯಲ್ಲಿ ಶಿಕ್ಷಕಿಯರಿಗೆ ಸರ್ಕಾರ ಈ ರೀತಿಯ ಅವಕಾಶ ಮಾಡಿಕೊಟ್ಟಿದೆ.
ಅಲ್ಲದೇ, ಕೊರೊನಾ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಶಿಕ್ಷಕರಿಗೆ ಸಾಲೆಗಳ ಹಾಜರಾತಿಗೆ ಕಾಲಾವಕಾಶ ನೀಡಲಾಗಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಕಾರಣ ಶಿಕ್ಷಕಿಯರಿಗೆ ವಿನಾಯಿತಿ ನೀಡಲಾಗಿದೆ.
ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರನ್ನು ಹೊರತು ಪಡಿಸಿ ಸಂಚಾರಕ್ಕ ಅನಾನುಕೂಲತೆ ಇರುವ ಶಿಕ್ಷಕಿಯರು ಜೂ. 21ರ ವರೆಗೆ ಮನೆಯಿಂದಲೇ ಕುಳಿತು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ಸೂಚಿಸಿದೆ.