ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಸದ್ಯಕ್ಕೆ ಯಾವುದೇ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದು, ಅಂತಹ ಸಂಪುಟ ವಿಸ್ತರಣೆ, ಪುನರ್ ರಚನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ಶೀತಲ ಸಮರದ ಕುರಿತು ಮಾತನಾಡಿದ ಅವರು, ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಈಗ ಮೌನವಾಗಿದ್ದಾರೆ. ಪರಸ್ಪರ ಟೀಕೆ ಕೂಡ ಮಾಡ್ತಾ ಇಲ್ಲ. ಹೀಗಾಗಿ ಆ ವಿಚಾರದ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಯಾವ ರೀತಿಯಾಗಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಮಾತನಾಡಿದ ಸಚಿವರು, ಈ ಸಂಬಂಧ ಪ್ರಮುಖ ಸಂಸ್ಥೆಗಳ ಜೊತೆ ಮಾತುಕತೆ ನಡೆಯಲಿದೆ. ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಅಗಬೇಕು ಅನ್ನೋ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ. ಕೌಶಲ್ಯತೆಯನ್ನ ಯಾವ ರೀತಿ ಬೆಳೆಸಬೇಕು ಅಂತ ಮಾತುಕತೆ ನಡೆಸಿದ್ದೇವೆ. ಸೈನ್ಸ್ ಕೇಂದ್ರಗಳಿಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ಮಾಡಲಿದ್ದೇವೆ. ಸೈನ್ಸ್ ಆಂಡ್ ಟೆಕ್ನಾಲಜಿ ಇಲಾಖೆಯಿಂದ ಕಿಟ್‌ಗಳ ವಿತರಣೆ ಕಾರ್ಯ ಮಾಡಲಿದ್ದೇವೆ ಎಂದು ಹೇಳಿದರು.