
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ರಾಜ್ಯದ ವಿವಿಧ ಸರಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಸರಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಸುತ್ತಿರುವುದು ಸ್ವಾಗತಾರ್ಹ ಸಂಗತಿ.
ಆದರೆ ವಯೋಮಿತಿ ಮೀರಿರುವ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಯಿಂದ ವಂಚಿತರಾಗುವ ಭೀತಿ ಎದುರಾಗಿದೆ.
ಕರ್ನಾಟಕ ಸರಕಾರ ಹೋರಾಡಿಸಿರುವ ಅಧಿಸೂಚನೆ ಪ್ರಕಾರ SC=45, ST=45, OBC=43, GM=40 ವಯೋಮಿತಿ ಇದೆ. ಒಂದೂವರೆ ವರ್ಷದ ಹಿಂದೆಯೇ ಸರಕಾರ ನೇಮಕಾತಿ ಪ್ರಕ್ರಿಯೆ ನಡೆಸಿದ್ದರೆ ಈಗ ವಯಸು ಮೀರಿದವರು ಸಹ ಸಹಾಯಕ ಪ್ರಾಧ್ಯಪಕ ಹುದ್ದೆಗೆ ಅರ್ಹರಾಗುತ್ತಿದ್ದರು.
ಕೋವಿಡ್-19 ಕಾರಣದಿಂದ ಮತ್ತು ಸರಕಾರದ ವಿಳಂಬ ಧೋರಣೆಯಿಂದಾಗಿ ಸಹಾಯಕ ಪ್ರಾಧ್ಯಪಕ ಹುದ್ದೆಯ ಆಕಾಂಕ್ಷಿಗಳಾಗಿರುವವರು ಅರ್ಹತೆಯನ್ನು ಕಳೆದುಕೊಳ್ಳುವಂತಾಗಿದೆ. ವಯಸ್ಸು ಮೀರಿದವರು ಸಹಾಯಕ ಪ್ರಾಧ್ಯಪಕರ ಹುದ್ದೆಯ ಕನಸಿಗೆ ಸರಕಾರವೇ ತಣ್ಣೀರು ಎರಚಿದೆ ಎಂದು ಹುದ್ದೆ ಆಕಾಂಕ್ಷಿಯೊಬ್ಬರು ಆಳಲು ತೋಡಿಕೊಂಡಿದ್ದಾರೆ.
ವಯಸ್ಸು ಮೀರಿದ NET, SET ಪಾಸಾಗಿರುವ ಮತ್ತು PhD ಹೊಂದಿದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸಾವಿರಾರು ಅಭ್ಯರ್ಥಿಗಳು ಅರ್ಹತೆ ಹೊಂದಿದ್ದರೂ ವಂಚಿತರಾಗುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಒಂದೂವರೆ ವರ್ಷದ ಹಿಂದೆಯೇ ನೇಮಕಾತಿ ಪ್ರಕ್ರಿಯೆ ಹೊರಡಿಸದೇ ಇದ್ದಿದ್ದರಿಂದ ವಯಸ್ಸು ಮೀರಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತಿಲ್ಲ.
ಆದ್ದರಿಂದ SC=45, ST=45, OBC=43, GM=40 ಯವರಿಗೆ ವಯಸ್ಸು ನಿಗದಿಪಡಿಸಿರುವ ಮಿತಿಯನ್ನು ಬದಲಾಯಿಸಿ ಅದನ್ನು 50 ವರ್ಷಕ್ಕೆ ಹೆಚ್ಚಿಸುವಂತೆ ಅಭ್ಯರ್ಥಿಗಳ ಒತ್ತಾಯವಾಗಿದೆ.
45 ವರ್ಷ ವಯಸ್ಸು ಮೀರಿದ NET, SET ಪಾಸಾಗಿರುವ ಮತ್ತು PhD ಹೊಂದಿರುವ ಎಲ್ಲ ಅಭ್ಯರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕಾಗಿದೆ. ಆ ಮೂಲಕ ಈ ಅಭ್ಯರ್ಥಿಗಳ ಹಿತ ಕಾಪಾಡಲು ವಯಸ್ಸು ಮಿತಿಯನ್ನು ಸಡಿಲುಗೊಳಿಸಲು ಆಕಾಂಕ್ಷಿಗಳು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.