ವಿಜಯಸಾಕ್ಷಿ ಸುದ್ದಿ, ನರಗುಂದ:
ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯಲ್ಲಿ ಸೋಮವಾರ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಯಿತು.
೨೦೨೧-೨೨ನೇ ಸಾಲಿನ ೧ ಮತ್ತು ೨ನೇ ಹಂತದ ಮಹಾತ್ಮಾ ಗಾಂಧಿ ರಾಷ್ತ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ೨೦೨೦-೨೧ರ ೧೪ ಮತ್ತು ೧೫ನೇ ಹಣಕಾಸು ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಜರುಗಿತು. ನೋಡಲ್ ಅಧಿಕಾರಿಗಳಾಗಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರರಾದ ಎಸ್.ಎಸ್.ವಾಲಿ ಆಗಮಿಸಿದ್ದರು.
ಸಭೆಯಲ್ಲಿ ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ, ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಬಸಪ್ಪ ಹಳೇಮನಿ, ಬಾಪು ಹಿರೇಗೌಡ್ರ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶಂಕ್ರಮ್ಮ ಚಲವಾದಿ, ಪಿಡಿಒ ಶೈನಾಜ್ ಮುಜಾವರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜಕ ಜಿ.ಎನ್.ಅಬ್ದುಲ್ಪುರ್, ಸಂಪನ್ಮೂಲ ವ್ಯಕ್ತಿಗಳಾದ ಎಂ.ಎಂ.ಆಶೇಖಾನ್, ಎಂ.ಆರ್.ಖನ್ನೂರ, ಎಸ್.ಬಿ.ದೇಸಾಯಿ, ಜೆ.ಜೆ.ಬಡಿಗೇರ, ಎಸ್.ವಿ.ಕೆಂಚನಗೌಡ್ರ, ಎಸ್.ಪಿ.ಬಡಿಗೇರ ಸೇರಿದಂತೆ ಗ್ರಾಮಸ್ಥರು ಇದ್ದರು.