ವಿಜಯಸಾಕ್ಷಿ ಸುದ್ದಿ, ಮೈಸೂರು
ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಸರ್ವಾಧಿಕಾರಿ. ಸಿಎಂ ಬಗ್ಗೆ ಮಠಾಧೀಶರಿಗೆ ಏಕೆ ಇಷ್ಟೊಂದು ಒಲವು ಇದೆ. ಬಿ.ಡಿ. ಜತ್ತಿ, ನಿಜಲಿಂಗಪ್ಪ, ಕಂಠಿ ಅವರಿಗಿಲ್ಲದ ಒಲವು ಯಡಿಯೂರಪ್ಪ ಅವರ ಬಗ್ಗೆ ಏಕಿದೆ? ಯಡಿಯೂರಪ್ಪ ದುರಾಡಳಿತ ನಡೆಸಿದ್ದಾರೆ ಎಂದು ಪ್ರತಿಭಟಿಸಿದ್ದಾರೆ.
ಬಿಜೆಪಿಗೆ ಯಡಿಯೂರಪ್ಪನೇ ಹೈಕಮಾಂಡ್. ಈ ಸರ್ಕಾರದಲ್ಲಿ ಮಂತ್ರಿಗಳು ಇಲ್ಲ, ಶಾಸಕರು ಇಲ್ಲ ಸಂಸದರು ಇಲ್ಲ. ಎಲ್ಲರನ್ನು ಹೆದರಿಸಿ ಇಟ್ಟುಕೊಂಡಿದ್ದಾರೆ. ಕೊರೊನಾ ತುರ್ತು ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಯಡಿಯೂರಪ್ಪ ವಿಫಲರಾಗಿದ್ದಾರೆ. ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಧಕ್ಕೆಯಾಗುತ್ತದೆ. ಪದವಿ ಶಿಕ್ಷಣ ಕನ್ನಡ ಪಠ್ಯ ಕಡಿತ ಮಾಡಿರುವುದು ಸರಿಯಾದ ನಿಲುವಲ್ಲ. ಸರ್ಕಾರ ಕೂಡಲೇ ಹಳೇ ಶಿಕ್ಷಣ ಪದ್ದತಿಯನ್ನೇ ಮುಂದುವರೆಸಬೇಕು ಎಂದು ವಾಟಾಳ್ ಒತ್ತಾಯಿಸಿದ್ದಾರೆ.